ಚಿಂತಾಕಿಯಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಅಭಿಯಾನಯಲ್ಲಿ ಭಾಗವಹಿಸಲಾಯಿತು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನೋಪಯೋಗಿ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿ ನಿಟ್ಟಿನಲ್ಲಿ ಭಾರತದಾದ್ಯಂತ ನಡೆಯುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಭಾಗವಾಗಿ ಇಂದು ಅಧಿಕಾರಿಗಳು ಚಿಂತಾಕಿ ಗ್ರಾಮಸ್ಥರಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಡಿ.ಸಿ.ಸಿ ಬ್ಯಾಂಕಿನ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಶ್ರೀ ಉಮಾಕಾಂತ ನಾಗಮಾರಪಳ್ಳಿ ಅವರು ಉಪಸ್ಥಿತರಿದ್ದು ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜೀ ಅವರ ನೇತೃತ್ವದ ಕೇಂದ್ರ ಸರ್ಕಾರ ಮಾತ್ರ DBT ಮೂಲಕ ಜನಪರ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲೂ ಸಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುತ್ತಿದೆ ಎಂದು ತಿಳಿಸಿದರು.